ಮಂಡ್ಯ ಜಿಲ್ಲೆಯ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿಯ ಮೃತದೇಹಗಳು ಪತ್ತೆಯಾಗಿವೆ. ದೇವಸ್ಥಾನಕ್ಕೆ ಭೇಟಿ ನೀಡಿದ್ದ ಕುಟುಂಬದ ಸದಸ್ಯರು ನದಿಯ ತಟದಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ವಿಜಯಮ್ಮ ನೀರಿನಲ್ಲಿ ಮುಳುಗಲು ಆರಂಭಿಸಿದಾಗ ಅವರನ್ನು ರಕ್ಷಿಸಲು ಶ್ವೇತಾ, ಚೈತ್ರಾ ಹಾಗೂ ಪ್ರಿಯಾಂಕಾ ಮುಂದಾಗಿದ್ದರು. ಬಳಿಕ ಅವರನ್ನು ಕಾಪಾಡಲು ನೀರಿಗೆ ಇಳಿದ ಕಾರು ಚಾಲಕ ಮಹೇಶ್ ಕೂಡ ಸುಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ರವಿ ಮಾತ್ರ ಸ್ಥಳೀಯರ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

