ಬಾಗಲಕೋಟೆ ಜಿಲ್ಲೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯ ಬದಲಿಗೆ ಅವರ ಪತ್ನಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ. ಎಚ್.ಪಿ. ಲೇಬಗೇರಿ ಅವರ ಪತ್ನಿ ಕಳೆದ ಕೆಲವು ದಿನಗಳಿಂದ ರೋಗಿಗಳನ್ನು ತಪಾಸಣೆ ಮಾಡಿ ಔಷಧ ವಿತರಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವೈದ್ಯಕೀಯ ಅರ್ಹತೆ ಇಲ್ಲದ ವ್ಯಕ್ತಿಯಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಘಟನೆ ಕುರಿತು ದೂರುಗಳು ಬಂದಿರುವುದನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ಸರಸ್ವತಿ ಮಾಗಿ ದೃಢಪಡಿಸಿದ್ದು, ಪ್ರಕರಣವನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

