Breaking News

ಮೊಳೆಗಳ ಜೋಡಿಸಿದ 5 ಸಿಲಿಂಡರ್ ಬಾಂಬ್ ಸ್ಪೋಟಿಸುವುದಾಗಿ ಶಿವಮೊಗ್ಗ ಕೋರ್ಟ್ ಗೆ ಬೆದರಿಕೆ: ಎಫ್‌ಐಆರ್ ದಾಖಲು

ಶಿವಮೊಗ್ಗ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಬುಧವಾರ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಂಗಳವಾರ ತಡರಾತ್ರಿ ನ್ಯಾಯಾಲಯದ ಅಧಿಕೃತ ಇ-ಮೇಲ್‌ಗೆ ಬಂದ ಸಂದೇಶದಲ್ಲಿ ಬಾಂಬ್ ಸ್ಫೋಟದ ಎಚ್ಚರಿಕೆ ನೀಡಲಾಗಿತ್ತು. ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿ ನ್ಯಾಯಾಲಯದ ಕಟ್ಟಡ, ನ್ಯಾಯಾಂಗ ಕೊಠಡಿಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಇದರಿಂದ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದ್ದು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಟ್ಟರು. ಬೆದರಿಕೆ ಸಂದೇಶದ ಮೂಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *