Breaking News

ಸುಪ್ರೀಂಕೋರ್ಟ್‌ ಹೆಸರಿನ ವೆಬ್‌ಸೈಟ್‌ ವಂಚನೆ ಪ್ರಕರಣ : 16 ರಾಜ್ಯಗಳ 80 ಸ್ಥಳಗಳಲ್ಲಿ ಸಿಬಿಐ ಶೋಧ

ನವದೆಹಲಿ: ಡಿಜಿಟಲ್ ಬಂಧನ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ದೇಶದ 16 ರಾಜ್ಯಗಳ 80 ಸ್ಥಳಗಳಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಚೆನ್ನೈನ ಬಿ. ನರೇಶ್ ಮತ್ತು ಕೋಲ್ಕತ್ತಾದ ಸಂಜಿಬ್ ಸಹಾ ಬಂಧಿತರು. ಬಂಧಿತರು ಶೆಲ್ ಕಂಪನಿಗಳು ಹಾಗೂ ಮ್ಯೂಲ್ ಬ್ಯಾಂಕ್ ಖಾತೆಗಳ ಮೂಲಕ ಸುಮಾರು ₹2 ಕೋಟಿ ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದರು ಎಂದು ಸಿಬಿಐ ತಿಳಿಸಿದೆ. ಈ ಖಾತೆಗಳನ್ನು ಡಿಜಿಟಲ್ ಬಂಧನ ಹೆಸರಿನಲ್ಲಿ ನಡೆಸಲಾಗುತ್ತಿದ್ದ ವಂಚನೆಗಳಿಗೆ ಬಳಸಲಾಗುತ್ತಿತ್ತು ಎನ್ನಲಾಗಿದೆ. ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಿಂದ ಬಂದ ದೂರಿನ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿತ್ತು. ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಲುವ ನಕಲಿ ವೆಬ್‌ಸೈಟ್ ಬಳಸಿ ಜನರನ್ನು ವಂಚಿಸಲಾಗುತ್ತಿತ್ತು ಎಂದು ತನಿಖೆಯಲ್ಲಿ ಪತ್ತೆಯಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *