Breaking News

ಅಪ್ರಾಪ್ತೆಗೆ ಪ್ರೇಮದ ಜಾಲ ಬೀಸಿ ಗರ್ಭಿಣಿ ಮಾಡಿದ ಕಾಮುಕ, ಮನನೊಂದು ಬಾಲಕಿ ಆತ್ಮಹತ್ಯೆ!

ಮಂಗಳೂರು: ಪ್ರೀತಿಯ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯನ್ನು ದೈಹಿಕವಾಗಿ ದುರುಪಯೋಗಪಡಿಸಿಕೊಂಡು, ಆಕೆ ಗರ್ಭಿಣಿಯಾಗುತ್ತಿದ್ದಂತೆ ವಂಚಿಸಿದ ಆರೋಪದಡಿ ಗಂಜಿಮಠದ ಮನೀಶ್ ಪೂಜಾರಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರ ಪ್ರಕಾರ, ಆರೋಪಿ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಆಕೆಯೊಂದಿಗೆ ಸಂಬಂಧ ಬೆಳೆಸಿದ್ದು, ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ವಿಷಯವನ್ನು ತಿಳಿಸಿದಾಗ ಆರೋಪಿ ಜವಾಬ್ದಾರಿ ನಿರಾಕರಿಸಿ ಆಕೆಯನ್ನು ನಿಂದಿಸಿದ್ದಾನೆ ಎನ್ನಲಾಗಿದೆ. ಈ ಬೆಳವಣಿಗೆಯಿಂದ ತೀವ್ರ ಮನನೊಂದ ಬಾಲಕಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *