ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆ 2023ರಲ್ಲಿ ನಡೆದಿದ್ದು, ವಿಷಯ ಇತ್ತೀಚೆಗೆ ಬಾಲಕಿಯ ಪೋಷಕರ ಗಮನಕ್ಕೆ ಬಂದ ನಂತರ ಜೂನ್ 23ರಂದು ದೂರು ದಾಖಲಿಸಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಲ್ಲಿ ಒಬ್ಬನಾದ 16 ವರ್ಷದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಬ್ಬ 17 ವರ್ಷದ ಬಾಲಕ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಗಂಭೀರ ಆರೋಪಗಳಡಿ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ. ಸಂತ್ರಸ್ತೆಯ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

