Breaking News

ವೃದ್ದೆಯ ಉಸಿರುಗಟ್ಟಿಸಿ ಕೊಲೆ ಪ್ರಕರಣ; ಆರೋಪಿಗಳು ಕೇರಳದಲ್ಲಿ ಅರೆಸ್ಟ್

ಕೊರಟಗೆರೆ ತಾಲೂಕಿನ ದಾಸಾಲುಕುಂಟೆ ಗ್ರಾಮದಲ್ಲಿ ತೋಟದ ಮನೆಯಲ್ಲಿ ವಾಸವಾಗಿದ್ದ 68 ವರ್ಷದ ರತ್ನಮ್ಮ ಅವರನ್ನು ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಮೈಮೇಲಿದ್ದ ಚಿನ್ನಾಭರಣ ದೋಚಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಂಗಾಧರ್ (24) ಹಾಗೂ ತುಮಕೂರು ಜಿಲ್ಲೆಯ ಸೂರ್ಯ (25) ಎಂಬ ಇಬ್ಬರು ಆರೋಪಿಗಳನ್ನು ಕೇರಳದ ತಿರುವನಂತಪುರಂ ಜಿಲ್ಲೆಯ ಕೊಟ್ಟಾಕರಿಯಲ್ಲಿ ಬಂಧಿಸಲಾಗಿದೆ. ಆರೋಪಿಗಳು ಮೂಲತಃ ಬಟ್ಟೆ ವ್ಯಾಪಾರಿಗಳಾಗಿದ್ದು, ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದರು. ಕೊರಟಗೆರೆ ಪಟ್ಟಣದ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಐದು ದಿನಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *