Breaking News

ಮಂಡ್ಯ : ಜವನಗಹಳ್ಳಿ ಗುಡ್ಡದ ಬಳಿ ಯುವತಿಯನ್ನು ಬರ್ಬರವಾಗಿ ಕೊಂದು ಶವ ಸುಟ್ಟು ಪರಾರಿಯಾದ ದುಷ್ಕರ್ಮಿಗಳು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಜವನಗಹಳ್ಳಿಯಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವಕ್ಕೆ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಳವಳ್ಳಿ-ಕೊಳ್ಳೇಗಾಲ ರಾಜ್ಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹೆದ್ದಾರಿ ಮೂಲಕ ಸಾಗುತ್ತಿದ್ದ ಲಾರಿ ಚಾಲಕನೊಬ್ಬ ಗುಡ್ಡದ ಬಳಿ ಹೊಗೆ ಮತ್ತು ದುರ್ವಾಸನೆ ಗಮನಿಸಿ ಪರಿಶೀಲಿಸಿದಾಗ ಶವ ಕಂಡುಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮೃತಳು ಸುಮಾರು 18 ವರ್ಷದ ಯುವತಿಯಾಗಿರಬಹುದೆಂದು ಶಂಕಿಸಲಾಗಿದ್ದು, ಆಕೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಯುವತಿಯನ್ನು ಬೇರೆಡೆ ಕೊಲೆ ಮಾಡಿ, ಶವವನ್ನು ವಾಹನದಲ್ಲಿ ತಂದು ಇಲ್ಲಿ ಎಸೆದು ಪೆಟ್ರೋಲ್ ಅಥವಾ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *