Breaking News

ಜ್ಯುವೆಲ್ಲರಿ ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ದೋಚಿದ್ದ ಕಳ್ಳ ಕಡೆಗೂ ಸಿಕ್ಕಿಬಿದ್ದ!

ಬೆಂಗಳೂರು: ಹಲಸೂರಿನ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳೆದ ತಿಂಗಳು ನಡೆದಿದ್ದ 10 ಕೆಜಿ ಬೆಳ್ಳಿ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ತಮಿಳುನಾಡು ಮೂಲದ ತೇಜು ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ತಡರಾತ್ರಿ ಅಂಗಡಿಯ ಹಿಂಬದಿಯ ಗೋಡೆಯನ್ನು ಕೊರೆದು ಒಳನುಗ್ಗಿ ಸುಮಾರು 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಹಲಸೂರು ಪೊಲೀಸರು ತಾಂತ್ರಿಕ ಸುಳಿವುಗಳ ಆಧಾರದ ಮೇಲೆ ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಕದ್ದಿದ್ದ 10 ಕೆಜಿ ಬೆಳ್ಳಿಯಲ್ಲಿ 5 ಕೆಜಿಯನ್ನು ಈಗಾಗಲೇ ಮಾರಾಟ ಮಾಡಿದ್ದಾನೆ. ಉಳಿದ 5 ಕೆಜಿ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಳಿದ ಹಣ ಮತ್ತು ಆಸ್ತಿಯ ಪತ್ತೆಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *