Breaking News

ಕಾಫಿಶಾಪ್‌ ತೆರೆಯಲು ಹೋದವನಿಗೆ ಕ್ರಿಪ್ಟೋಕರೆನ್ಸಿ ಮೋಸ! : ಇಬ್ಬರು ಕಾಶ್ಮೀರಿಗಳು ಸೇರಿ 12 ಮಂದಿ ಬಂಧನ!

ಬೆಂಗಳೂರು: ಸಂಜಯನಗರದಲ್ಲಿ ಕ್ರಿಪ್ಟೋಕರೆನ್ಸಿ ಎಕ್ಸ್‌ಚೇಂಜ್ ಹೆಸರಿನಲ್ಲಿ ₹17.6 ಲಕ್ಷ ದರೋಡೆ ನಡೆಸಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಕಾಶ್ಮೀರ ಮೂಲದವರೂ ಸೇರಿದಂತೆ 12 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹13.90 ಲಕ್ಷ ನಗದು, 6 ಬೈಕ್‌, 1 ಕಾರು ಹಾಗೂ 13 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಾಸಗಿ ಕಂಪನಿ ಉದ್ಯೋಗಿ ವಿಶ್ವಾಸ್ ಅವರು ಕಾಫಿ ಶಾಪ್ ಆರಂಭಿಸಲು ಕಿಚನ್ ಸಾಮಗ್ರಿ ಖರೀದಿಸುವ ಉದ್ದೇಶ ಹೊಂದಿದ್ದರು. ವಿದೇಶದಿಂದ ಕಡಿಮೆ ಬೆಲೆಗೆ ಸಾಮಗ್ರಿ ತರಿಸಿಕೊಡುವುದಾಗಿ ನಂಬಿಸಿ, ಕ್ರಿಪ್ಟೋ ಎಕ್ಸ್‌ಚೇಂಜ್ ನೆಪದಲ್ಲಿ ಆರೋಪಿಗಳು ಅವರನ್ನು ಹಣದೊಂದಿಗೆ ನಿಗದಿತ ಸ್ಥಳಕ್ಕೆ ಕರೆಸಿಕೊಂಡಿದ್ದರು. ಜೂನ್ 9ರಂದು ವಿಶ್ವಾಸ್ ಹಣದೊಂದಿಗೆ ಸ್ಥಳಕ್ಕೆ ಬಂದಾಗ ಬೈಕ್‌ನಲ್ಲಿ ಬಂದ ಆರೋಪಿಗಳು ₹17.6 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ದೂರು ದಾಖಲಿಸಿಕೊಂಡ ಸಂಜಯನಗರ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಸುಳಿವಿನ ಆಧಾರದ ಮೇಲೆ 12 ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *