Breaking News

ಬಸ್‌ನಲ್ಲಿ ಮಹಿಳೆಯರ ಚಿನ್ನ ಎಗರಿಸುತ್ತಿದ್ದ ಕಳ್ಳಿ ಅಂದರ್‌

ಶಿರಸಿ: ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಮಹಿಳೆಯ ಬ್ಯಾಗಿನಿಂದ ₹1.59 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರು ಮೂಲದ ಜ್ಯೋತಿ (ಸಂಜನಾ) ವೆಂಕಟೇಶ ಪಸುಪುಲೇಟ್ (32) ಎಂಬ ಮಹಿಳೆಯನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರದಿಂದ ಬಂದಿದ್ದ ಸವಿತಾ ನಾಯ್ಕ ಅವರ ವ್ಯಾನಿಟಿ ಬ್ಯಾಗಿನ ಜಿಪ್ ತೆರೆಯುವ ಮೂಲಕ ಆರೋಪಿತೆ ಸುಮಾರು 30 ಗ್ರಾಂ ಚಿನ್ನಾಭರಣ, ಮೊಬೈಲ್ ಹಾಗೂ ₹8,000 ನಗದು ಕಳವು ಮಾಡಿದ್ದಳು. ದೂರು ದಾಖಲಿಸಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿತೆಯಿಂದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದ ₹9 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *