Breaking News

ಮದ್ಯದ ನಶೆಯಲ್ಲಿ ಯುವತಿ ರಂಪಾಟ: ಅಡ್ಡಾದಿಡ್ದಿ ಥಾರ್ ಚಲಾಯಿಸಿ ಹುಚ್ಚಾಟ: ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ

ದಾವಣಗೆರೆ: ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿಯಾಗಿ ಥಾರ್ ಜೀಪ್ ಚ್ಜಲಾಯಿಸಿಕೊಂಡು ಬಂದಿದ್ದದ್ದಲ್ಲದೇ ಪ್ರಶ್ನೆ ಮಡಿದ್ದಕ್ಕೆ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ನಡೆದಿದೆ.ಮದ್ಯ ಸೇವನೆ ಮಾಡಿ ಯುವತಿ ಥಾರ್ ಕಾರನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿದ್ದಳು. ಈ ವೇಳೆ ಡ್ರಿಂಕ್ & ಡ್ರೈವ್ ತಪಾಸಣೆ ಮಾಡುತ್ತಿದ್ದ ಪೊಲೀಸರು, ಕಾರನ್ನು ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವತಿ, ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು, ಹಲ್ಲೆ ಮಾಡಿದ್ದಾಳೆ. ಯುವತಿ ರಂಪಾಟ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಆಕೆಯ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *