ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಜಾಲ ಸಕ್ರಿಯವಾಗಿದ್ದು, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಇರುವ ಕ್ಯಾಂಟೀನ್, ಪಾನ್‌ಶಾಪ್ ಹಾಗೂ ಸಣ್ಣ ಅಂಗಡಿಗಳ ಮೂಲಕ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದೆ. 2025ರಲ್ಲಿ ಬೆಂಗಳೂರಿನಲ್ಲಿ 27 ಹಾಗೂ ಮಂಗಳೂರಿನಲ್ಲಿ 3 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದರೆ, 2026ರ ಫೆಬ್ರವರಿ ಅಂತ್ಯದವರೆಗೆ ಕ್ರಮವಾಗಿ 10 ಮತ್ತು 1 ಪ್ರಕರಣ ದಾಖಲಾಗಿದೆ. ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ವ್ಯಸನದ ಜಾಲಕ್ಕೆ ಸೆಳೆಯುತ್ತಿರುವುದು ಪೊಲೀಸರಿಗೆ ಸವಾಲಾಗಿದೆ. ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದಡಿ ಪೊಲೀಸ್ ಇಲಾಖೆ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ, ಅಂಗಡಿಗಳ ತಪಾಸಣೆ ಹಾಗೂ ಡ್ರಗ್ಸ್ ಪೆಡ್ಲರ್‌ಗಳ ವಿರುದ್ಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

