Breaking News

ಬೀದರ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 9.41 ಕೋಟಿ ಮೌಲ್ಯದ ಗಾಂಜಾ, ಮಾದಕ ವಸ್ತುಗಳು ನಾಶ!

ಬೀದರ್: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ 22 ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ ಸುಮಾರು ₹9.41 ಕೋಟಿ ಮೌಲ್ಯದ ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮಿಟಿ ಗುರುವಾರ ನಾಶಪಡಿಸಿದೆ. ಭಾಲ್ಕಿ ತಾಲೂಕಿನ ಧನ್ನೂರ್ ಗ್ರಾಮದ ಜೈವಿಕ ತ್ಯಾಜ್ಯ ವಿಲೇವಾರಿ ಘಟಕದ ಕುಲುಮೆಯಲ್ಲಿ 997 ಕೆಜಿ 764 ಗ್ರಾಂ ಗಾಂಜಾ, 51,638 ಮಾದಕ ಗುಳಿಗೆಗಳು ಹಾಗೂ 743 ಸಿರಫ್ ಬಾಟಲ್‌ಗಳನ್ನು ಪರಿಸರ ನಿಯಮ ಪಾಲಿಸಿ ಸುಟ್ಟು ಭಸ್ಮ ಮಾಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆದಿದ್ದು, ಮಾದಕ ಮುಕ್ತ ಸಮಾಜ ನಿರ್ಮಾಣ ಹಾಗೂ ನ್ಯಾಯಾಲಯದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *