Breaking News

ಕರ್ನಾಟಕದಲ್ಲೇ ಸಿಂಥೆಟಿಕ್ ಡ್ರಗ್ಸ್ ತಯಾರಿಕೆ ಅಡ್ಡೆಗಳು

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಪೂರೈಕೆಯ ಜೊತೆಗೆ ಉತ್ಪಾದನೆಯೂ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಮತ್ತು ಮೈಸೂರು ಹೊರವಲಯಗಳಲ್ಲಿ ಗುಪ್ತವಾಗಿ ಸಿಂಥೆಟಿಕ್ ಡ್ರಗ್ಸ್ ತಯಾರಿಕಾ ಘಟಕಗಳು ಕಾರ್ಯನಿರ್ವಹಿಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಮೈಸೂರು ಭಾಗದಲ್ಲಿ ಸುಮಾರು ₹390 ಕೋಟಿ ಹಾಗೂ ಬೆಂಗಳೂರಿನಲ್ಲಿ ₹51 ಕೋಟಿ ಮೌಲ್ಯದ ಡ್ರಗ್ಸ್ ಮತ್ತು ತಯಾರಿಕಾ ಸಾಮಗ್ರಿ ಪತ್ತೆಯಾಗಿದ್ದು, ಹೊರರಾಜ್ಯದ ಆರೋಪಿಗಳು ಫಾರ್ಮ್‌ಹೌಸ್ ಹಾಗೂ ಬಾಡಿಗೆ ಶೆಡ್‌ಗಳನ್ನು ಬಳಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿರುವುದು ಬಹಿರಂಗವಾಗಿದೆ. ಡ್ರಗ್ಸ್ ಉತ್ಪಾದನಾ ಜಾಲವನ್ನು ಮಟ್ಟಹಾಕುವುದು ರಾಜ್ಯದ ಭದ್ರತೆಗೆ ದೊಡ್ಡ ಸವಾಲಾಗಿದ್ದು, ಪೊಲೀಸರು ನಿಗಾ ಮತ್ತು ದಾಳಿಗಳನ್ನು ತೀವ್ರಗೊಳಿಸಿದ್ದಾರೆ. ಕರ್ನಾಟಕ ಡ್ರಗ್ಸ್ ಉತ್ಪಾದನಾ ಕೇಂದ್ರವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *