ಬೆಂಗಳೂರು: ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ನಮ್ಮ ಮೆಟ್ರೋ ಪಿಲ್ಲರ್‌ಗಳ ವಿದ್ಯುತ್ ಕಾಮಗಾರಿ ವೇಳೆ ಗುತ್ತಿಗೆ ಕಾರ್ಮಿಕರೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಸಂಭವಿಸಿದೆ. ಪಿಲ್ಲರ್ ಸಂಖ್ಯೆ 153ರ ಸಮೀಪ ಅರ್ಥ್ ಪಿಟ್ ಕಾಮಗಾರಿ ನಡೆಸುತ್ತಿದ್ದ ವೇಳೆ ಕಾರ್ಮಿಕ ಲೈವ್ ವಿದ್ಯುತ್ ಸಂಪರ್ಕಕ್ಕೆ ಬಂದಿದ್ದು, ಗಂಭೀರ ಗಾಯಗೊಂಡ ಅವರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ನಿಖರ ಕಾರಣ ಪತ್ತೆಹಚ್ಚಲು ಬಿಎಂಆರ್‌ಸಿಎಲ್ ಸಮಗ್ರ ತನಿಖೆಗೆ ಆದೇಶಿಸಿದ್ದು, ಮೃತ ಕಾರ್ಮಿಕನ ಕುಟುಂಬಕ್ಕೆ ಸಂತಾಪ ಸೂಚಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

