ಶಿರಸಿ: ತಾಲೂಕಿನ ಇಟಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಂಗನಮನೆಯಲ್ಲಿ 35 ವರ್ಷದ ಪರಮೇಶ್ವರ ಬಾಬು ನಾಯ್ಕ ಅವರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅದೇ ಗ್ರಾಮದ ಪರಮೇಶ್ವರ ತಿಮ್ಮ ನಾಯ್ಕ (27)ನನ್ನು ಬಂಧಿಸಿದ್ದಾರೆ. ಮೊಬೈಲ್ ಕರೆ ಬಂದ ಹಿನ್ನೆಲೆಯಲ್ಲಿ ಮನೆಯಿಂದ ಹೊರಟಿದ್ದ ಪರಮೇಶ್ವರ ರಾತ್ರಿ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಲಾಗಿದ್ದು, ಶುಕ್ರವಾರ ಬೆಳಗ್ಗೆ ಅರಣ್ಯ ಪ್ರದೇಶದಲ್ಲಿ ಅವರ ಶವ ಪತ್ತೆಯಾಗಿದೆ. ಅಕ್ರಮ ಸಂಬಂಧದ ಶಂಕೆ ವ್ಯಕ್ತವಾಗಿದ್ದರೂ, ಹತ್ಯೆಯ ನಿಖರ ಕಾರಣ ತನಿಖೆಯಿಂದ ತಿಳಿಯಬೇಕಿದೆ. ಶ್ವಾನದಳ ಆರೋಪಿಯ ಮನೆಗೆ ತೆರಳಿ, ಬಚ್ಚಿಟ್ಟಿದ್ದ ಕತ್ತಿಯನ್ನು ಪತ್ತೆಹಚ್ಚಿದ ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

