ಬೆಂಗಳೂರು: ಜಮೀನಿನಲ್ಲಿ ಕೊಳವೆಬಾವಿ ಕೊರೆಸುವ ವೇಳೆ 1.5 ಕೆ.ಜಿ. ಚಿನ್ನ ಸಿಕ್ಕಿದೆ ಎಂದು ನಂಬಿಸಿ ನಕಲಿ ಚಿನ್ನ ನೀಡಿ ₹23 ಲಕ್ಷ ವಂಚಿಸಿದ್ದ ಪ್ರಕರಣದಲ್ಲಿ ಬಳ್ಳಾರಿಯ ಹನುಮಂತಪ್ಪ (41)ನನ್ನು ತಿಲಕ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹19.93 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಕಾರು ಡೀಲರ್ ಶಿಶಿರ್‌ಗೆ ಆರೋಪಿ ಚಿನ್ನದ ಫೋಟೊಗಳನ್ನು ಕಳುಹಿಸಿ ನಂಬಿಕೆ ಮೂಡಿಸಿದ್ದ. ಬಳಿಕ 2 ಗ್ರಾಂ ಅಸಲಿ ಚಿನ್ನ ತೋರಿಸಿ ವಿಶ್ವಾಸ ಗಳಿಸಿದ ನಂತರ, 1.5 ಕೆ.ಜಿ. ನಕಲಿ ಚಿನ್ನದ ಬಿಲ್ಲೆಗಳನ್ನು ನೀಡಿ ₹23 ಲಕ್ಷ ಪಡೆದು ಪರಾರಿಯಾಗಿದ್ದ. ದೂರು ದಾಖಲಾದ ಬಳಿಕ ಪೊಲೀಸರು ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರ ಡಾಬಾ ಬಳಿ ಹನುಮಂತಪ್ಪನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

