Breaking News

ಸುಟ್ಟ ಸ್ಥಿತಿಯಲ್ಲಿ ಯುವತಿಯ ಕಳೇಬರ ಪತ್ತೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬೈಪಾಸ್ ರಸ್ತೆಯ ಜವನಗಹಳ್ಳಿ ಗುಡ್ಡದ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟಿರುವ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಬುಧವಾರ ರಾತ್ರಿ ಪತ್ತೆಯಾಗಿದೆ. ಸರಕು ಸಾಗಣೆ ಲಾರಿ ಚಾಲಕ ರಸ್ತೆ ಬದಿಗೆ ತೆರಳಿದ್ದ ವೇಳೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮೃತದೇಹ ಕಂಡುಬಂದಿದ್ದು, ತಕ್ಷಣ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಾಹಿತಿ ಮೇರೆಗೆ ಬೆಳಕವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ 2–3 ದಿನಗಳ ಹಿಂದೆ ನಡೆದಿರಬಹುದೆಂದು ಶಂಕಿಸಲಾಗಿದ್ದು, ಸ್ಥಳದಿಂದ ದೊರೆತ ವಾಚ್, ಉಂಗುರ ಸೇರಿದಂತೆ ಕೆಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಎಸ್ಪಿ ಡಾ. ಶೋಭಾರಾಣಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *