ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ, ನಿಯಂತ್ರಣ ತಪ್ಪಿದ ಅಶೋಕ್ ಲೇಲ್ಯಾಂಡ್ ವಾಹನ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಓಮಿನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25) ಹಾಗೂ ರಮೇಶ್ ಬಳ್ಳಾರಿ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಕನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

