ಕೊಪ್ಪಳ: ಮಂತ್ರಾಲಯಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ಕುಟುಂಬದ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದ್ದು, ಕುಕನೂರು ತಾಲೂಕಿನ ಭಾನಾಪೂರ ಸಮೀಪ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ಕು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಎದುರು ದಿಕ್ಕಿನಿಂದ ಬಂದ ಭಾರೀ ವಾಹನ ಡಿವೈಡರ್ ದಾಟಿ ಓಮ್ನಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಕನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

