Breaking News

ಬೆಂಗಳೂರು: ಶೆಡ್‌ ಒಂದರಲ್ಲಿ ಇಟ್ಟಿದ್ದ ಬರೋಬ್ಬರಿ 3 ಕೋಟಿ ನಗದು ಹಣ ಪತ್ತೆ! ಹಣದ ಮೂಟೆ ನೋಡಿ ಪೊಲೀಸರೇ ಶಾಕ್

ಬೆಂಗಳೂರು: ನಗರದ ಕುರುಬರಹಳ್ಳಿಯ ಶೆಡ್‌ ಒಂದರ ಮೇಲೆ ದಾಳಿ ನಡೆಸಿದ ಮಹಾಲಕ್ಷ್ಮೀ ಲೇಔಟ್ ಪೊಲೀಸರು ದಾಖಲೆಗಳಿಲ್ಲದ ₹2.98 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ನಾಲ್ಕು ಬ್ಯಾಗ್‌ಗಳಲ್ಲಿ ಕಂತೆ ಕಂತೆ ನೋಟುಗಳನ್ನು ಅಡಗಿಸಿಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಹಾಗೂ ವೆಂಕಟೇಶ್ ಎಂಬುವವರನ್ನು ಬಂಧಿಸಲಾಗಿದೆ. ಜೂನ್‌ 2ರಂದು ಖಚಿತ ಮಾಹಿತಿಯ ಮೇರೆಗೆ ‘ಶೇಷಾದ್ರಿ ಇಂಡಸ್ಟ್ರೀಸ್’ ಶೆಡ್‌ಗೆ ದಾಳಿ ನಡೆಸಿದ ವೇಳೆ ಭಾರಿ ಪ್ರಮಾಣದ ನಗದು ಪತ್ತೆಯಾಯಿತು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ರಾತ್ರಿ ಪೂರ್ತಿ ನೋಟು ಎಣಿಕೆ ನಡೆಸಿದ ಬಳಿಕ ಒಟ್ಟು ₹2,98,00,900 ಇರುವುದಾಗಿ ದೃಢಪಟ್ಟಿತು. ಹಣದ ಮೂಲಕ್ಕೆ ಸಂಬಂಧಿಸಿದ ದಾಖಲೆಗಳನ್ನು ಆರೋಪಿಗಳು ಒದಗಿಸದ ಹಿನ್ನೆಲೆ, ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್‌ 98ರಡಿ ಎಫ್‌ಐಆರ್ ದಾಖಲಿಸಿರುವ ಪೊಲೀಸರು, ಹಣ ಹವಾಲಾ ಅಥವಾ ಇತರೆ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದ್ದೇ ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *