Breaking News

ಕಲಬುರಗಿ, ರಾಯಚೂರಿನಲ್ಲಿ ಕೃತಕ ಶೇಂದಿ ದಂಧೆ: 1,500 ಕೆಜಿ ಮರಣಾಂತಿಕ ಕೆಮಿಕಲ್ ಸೀಜ್ ಮಾಡಿದ ಅಬಕಾರಿ ಇಲಾಖೆ

ಹುಬ್ಬಳ್ಳಿ: ಕಲ್ಯಾಣ ಕರ್ನಾಟಕ ಸೇರಿ ರಾಜ್ಯದಲ್ಲಿ ವಿಷಕಾರಿ ನಕಲಿ ಕಳ್ಳಿನ ದಂಧೆ ವಿರುದ್ಧ ಅಬಕಾರಿ ಇಲಾಖೆ ಭಾರಿ ಕಾರ್ಯಾಚರಣೆ ನಡೆಸಿದ್ದು, ಕಳೆದ ಮೂರು ವರ್ಷಗಳಲ್ಲಿ 1,500 ಕೆಜಿ ಕ್ಲೋರಲ್ ಹೈಡ್ರೇಟ್ ರಾಸಾಯನಿಕ ಪುಡಿ ವಶಪಡಿಸಿಕೊಂಡಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 771 ಮಂದಿಯನ್ನು ಬಂಧಿಸಲಾಗಿದೆ. ರಾಯಚೂರು ಜಿಲ್ಲೆಯಲ್ಲೇ 1,033 ಕೆಜಿ ಕ್ಲೋರಲ್ ಹೈಡ್ರೇಟ್ ಹಾಗೂ 16,905 ಲೀಟರ್ ಕೃತಕ ಕಳ್ಳು ಜಪ್ತಿ ಮಾಡಲಾಗಿದೆ. ಕಡಿಮೆ ಬೆಲೆ ಮತ್ತು ಹೆಚ್ಚು ಅಮಲಿನ ಕಾರಣ ದಿನಗೂಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಈ ವಿಷಕಾರಿ ಕಳ್ಳು ಮಾರಾಟವಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಕ್ಲೋರಲ್ ಹೈಡ್ರೇಟ್ ಮಿಶ್ರಿತ ಕಳ್ಳಿನ ಸೇವನೆಯಿಂದ ಅಂಗಾಂಗ ವೈಫಲ್ಯ, ಪಾರ್ಶ್ವವಾಯು ಹಾಗೂ ಸಾವಿನ ಅಪಾಯವಿದೆ. ಈ ನಿಷೇಧಿತ ರಾಸಾಯನಿಕ ನೆರೆ ರಾಜ್ಯಗಳಿಂದ ಅಕ್ರಮವಾಗಿ ಬರುತ್ತಿದ್ದು, ಅದರ ಮೇಲೆ ದೇಶವ್ಯಾಪಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *