Breaking News

ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್

ಹಾಸನ: ನಗರದ ಚನ್ನಪಟ್ಟಣ ಬಡಾವಣೆಯ ನೂತನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಶನಿವಾರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆದರಿಕೆ ಇ-ಮೇಲ್ ಆಧರಿಸಿ ಬಾಂಬ್ ನಿಷ್ಕ್ರಿಯ ದಳದಿಂದ ನ್ಯಾಯಾಲಯ ಆವರಣದಲ್ಲಿ ಪರಿಶೀಲನೆ ನಡೆಸಲಾಗಿದೆ. ಇ-ಮೇಲ್‌ನಲ್ಲಿ ನ್ಯಾಯಾಲಯದ ದಾಖಲೆ ಕೊಠಡಿಗಳು ಹಾಗೂ ಇ-ಸೇವೆ ಕೇಂದ್ರಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಉಲ್ಲೇಖಿಸಿ, ಮಧ್ಯಾಹ್ನ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿತ್ತು. ನ್ಯಾಯಾಧೀಶರನ್ನು ಸ್ಥಳಾಂತರಿಸುವಂತೆಯೂ ಸೂಚನೆ ನೀಡಲಾಗಿತ್ತು. ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆದರಿಕೆ ಇ-ಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *