ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ನಾಡಬಾಂಬ್ ಸ್ಫೋಟಗೊಂಡು ನಾಗೇಂದ್ರ ಎಂಬ ಯುವಕ ಮೃತಪಟ್ಟಿದ್ದಾನೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆತ ಬೆಂಗಳೂರಿನಿಂದ ಯುವತಿಯನ್ನು ಬಲವಂತವಾಗಿ ಕರೆತಂದಿದ್ದ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಜಗಳದ ವೇಳೆ ನಾಗೇಂದ್ರ ಯುವತಿಗೆ ಚಾಕುವಿನಿಂದ ಇರಿದಿದ್ದು, ಪ್ರಾಣಭಯದಿಂದ ಆಕೆ ಕಾರಿನಿಂದ ಜಿಗಿದು ತಪ್ಪಿಸಿಕೊಂಡಿದ್ದಾಳೆ. ಬಳಿಕ ಚಾಲಕ ಕೆಳಗಿಳಿದ ತಕ್ಷಣ ಕಾರಿನ ಡೋರ್‌ಗಳನ್ನು ಲಾಕ್ ಮಾಡಿಕೊಂಡ ನಾಗೇಂದ್ರ, ಕಾರಿನೊಳಗೇ ನಾಡಬಾಂಬ್ ಸ್ಫೋಟಿಸಿಕೊಂಡಿದ್ದಾನೆ. ಗಂಭೀರ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರಿನ ಸಮೀಪ ಮತ್ತೊಂದು ಜೀವಂತ ನಾಡಬಾಂಬ್ ಪತ್ತೆಯಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

