Breaking News

ಡ್ರಗ್ಸ್ ಪ್ರಕರಣ: ರಾಜಧಾನಿ ಬೆಂಗಳೂರಿಗೆ ಮೊದಲ ಸ್ಥಾನ; ಎರಡು ಮತ್ತು ಮೂರನೇ ಸ್ಥಾನದಲ್ಲಿ ಮಂಗಳೂರು ಹಾಗೂ ಶಿವಮೊಗ್ಗ

ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರೂ, ಡ್ರಗ್ಸ್ ಜಾಲ ರಾಜ್ಯದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಕಳೆದ ಐದು ತಿಂಗಳ ಅಂಕಿ-ಅಂಶಗಳ ಪ್ರಕಾರ ಡ್ರಗ್ಸ್ ಪ್ರಕರಣಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, ಮಂಗಳೂರು ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನದಲ್ಲಿವೆ. ಜನವರಿಯಿಂದ ಮೇ ತಿಂಗಳವರೆಗೆ ಬೆಂಗಳೂರಿನಲ್ಲಿ ಒಟ್ಟು 2,351 ಡ್ರಗ್ಸ್ ಪ್ರಕರಣಗಳು ದಾಖಲಾಗಿವೆ. ಮಂಗಳೂರು ಮತ್ತು ಶಿವಮೊಗ್ಗದಲ್ಲೂ ಗಮನಾರ್ಹ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದ ಪ್ರಮುಖ ಡ್ರಗ್ಸ್ ಹಾಟ್‌ಸ್ಪಾಟ್‌ಗಳಾಗಿ ಗುರುತಿಸಿಕೊಂಡಿವೆ. ರಾಜ್ಯದಲ್ಲಿ ಜನವರಿಯಲ್ಲಿ ಒಟ್ಟು 1,397 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದರೆ, ಮೇ ವೇಳೆಗೆ ಅದು 813ಕ್ಕೆ ಇಳಿಕೆಯಾಗಿದೆ. ಪೊಲೀಸ್ ಇಲಾಖೆಯ ನಿರಂತರ ಕಾರ್ಯಾಚರಣೆಯಿಂದ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಅಂಕಿ-ಅಂಶಗಳು ಸೂಚಿಸಿವೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *