Breaking News

ಗಾಂಜಾ ಪ್ರಕರಣದಲ್ಲಿ ಇಬ್ಬರ ಬಂಧನ

ಶ್ರೀರಂಗಪಟ್ಟಣ: ತಾಲೂಕಿನ ಬಳ್ಳೆಕೆರೆ ಗ್ರಾಮ ಹೊರವಲಯದ ಸಿಡಿಎಸ್ ನಾಲೆ ಏರಿ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಮಾಲು ಸಮೇತ ಅರಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬಳ್ಳೆಕೆರೆ ಗ್ರಾಮದ ಸುನೀಲ್ (46) 850ಗ್ರಾಂ ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿದ್ದು, ಇದನ್ನು ಖರಿದೀಸಲು ಆಗಮಿಸಿದ್ದ ಮಾಕನಹಳ್ಳಿ ಗ್ರಾಮದ ತಿಲಕ್ (27) ನನ್ನು ಗುರುವಾರ ರಾತ್ರಿ ಪೊಲೀರು ಬಂಧಿಸಿದ್ದಾರೆ. ಅರಕೆರೆ ಠಾಣೆಯ ಸಬ್ ಇನ್ ಸ್ಪೆಕ್ಟರ್ ವಿನೋದ್ ಕುಮಾರ್ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ ನಾಗೇಂದ್ರ, ಸಿಬ್ಬಂದಿ ಲಕ್ಷ್ಮೀಪುತ್ರ, ಶಿವಪ್ರಸಾದ್, ಕಾರ್ತಿಕ್, ನವೀನ್, ಚೇತನ್ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು. ಆರೋಪಿಗಳ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *