ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಐದು ಬಸ್‌ಗಳು ಬೆಂಕಿಗಾಹುತಿಯಾಗಿದ್ದರೂ, ಬೆಂಗಳೂರು–ಮಂಗಳೂರು ಮಾರ್ಗದ ಖಾಸಗಿ ಬಸ್‌ಗಳಲ್ಲಿ ಅಕ್ರಮ ಸರಕು ಸಾಗಾಟ ಮುಂದುವರಿದಿದೆ. ಬಸ್‌ಗಳ ಡಿಕ್ಕಿ ಹಾಗೂ ಮೇಲ್ಭಾಗದಲ್ಲಿ ಅಪಾಯಕಾರಿ ವಸ್ತುಗಳನ್ನು ಸಾಗಿಸುತ್ತಿರುವುದು ಪ್ರಯಾಣಿಕರ ಸುರಕ್ಷತೆಗೆ ಅಪಾಯ ತಂದೊಡ್ಡಿದೆ. ಜಿಎಸ್‌ಟಿ ತಪ್ಪಿಸಲು ಎಲೆಕ್ಟ್ರಾನಿಕ್ ವಸ್ತುಗಳು, ಪೇಂಟ್ ಸಿಲಿಂಡರ್ ಸೇರಿದಂತೆ ವಿವಿಧ ಸರಕುಗಳನ್ನು ಖಾಸಗಿ ಬಸ್‌ಗಳಲ್ಲಿ ಸಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಮಂಗಳೂರು, ಉಡುಪಿ ಸೇರಿದಂತೆ ಹಲವು ಕಡೆಗಳಲ್ಲಿ ಈ ಸರಕುಗಳನ್ನು ಬಸ್‌ಗಳಿಂದ ಇಳಿಸಲಾಗುತ್ತಿರುವುದು ಕಂಡುಬಂದಿದೆ. ಇತ್ತೀಚೆಗೆ ರಾಜ್ಯದ ವಿವಿಧೆಡೆ ಬಸ್‌ಗಳಿಗೆ ಬೆಂಕಿ ತಗುಲಿದ ಹಲವು ಘಟನೆಗಳು ನಡೆದಿದ್ದರೂ ಅಕ್ರಮ ಸರಕು ಸಾಗಾಟ ನಿಂತಿಲ್ಲ. ನಿಯಮ ಉಲ್ಲಂಘಿಸುವ ಬಸ್‌ಗಳ ವಿರುದ್ಧ ಸಾರಿಗೆ ಇಲಾಖೆ ಹಾಗೂ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Check Also
ದೇರಳಕಟ್ಟೆ: ಮೆಡಿಕಲ್ ಕಾಲೇಜಿನಲ್ಲಿ Ragging ಪ್ರಕರಣ ದಾಖಲು
ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …
bigtvnews | Hubli Dharwad News | Kannada News | Karnataka News Hubli News | News In Hubli | Local news

