ಚಿಕ್ಕಮಗಳೂರು: ಬಾಳೂರು ವ್ಯಾಪ್ತಿಯ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಹಬೀವರ್ ಇಸ್ಲಾಂ ಎಂಬ ವಲಸೆ ಕಾರ್ಮಿಕ ಬಾಲಕಿಯನ್ನು ಅಪಹರಿಸಿ ಮತಾಂತರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಬಾಳೂರು ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ತಿಳಿಸಿದ್ದಾರೆ. ಬಾಲಕಿಯ ಕುಟುಂಬ ಮಧ್ಯಪ್ರದೇಶ ಮೂಲದ್ದಾಗಿದ್ದು ಇಲ್ಲಿಗೆ ಕೂಲಿ ಕೆಲಸಕ್ಕೆ ಬಂದಿದ್ದರು. ಆರೋಪಿ ಯುವಕನ ಕುಟುಂಬವು ಅಸ್ಸಾಂನಿಂದ ಬಂದು ಇಲ್ಲಿನ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

