Breaking News

ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ: ಮತ್ತೆ ಮೂವರ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ ಕೆಂಪುಕೋಟೆ ಸಮೀಪ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಮೂವರು ಆರೋಪಿಗಳ ವಿರುದ್ಧ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಜಮೀರ್‌ ಅಹ್ಮದ್‌ ಆಲಂಗೀರ್, ತುಫೈಲ್‌ ಅಹ್ಮದ್‌ ಬಟ್ ಹಾಗೂ ತಲೆಮರೆಸಿಕೊಂಡಿರುವ ಮುಜಫರ್‌ ಅಹ್ಮದ್‌ ಹೆಸರು ಆರೋಪಪಟ್ಟಿಯಲ್ಲಿ ಸೇರಿದೆ. ಇದರೊಂದಿಗೆ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿರುವ ಆರೋಪಿಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಈ ಹಿಂದೆ ಪ್ರಮುಖ ಸಂಚುಕೋರ ಡಾ. ಉಮರ್‌ ಉನ್‌ ನಬಿ ಸೇರಿ 10 ಮಂದಿಯ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು. ಕಳೆದ ವರ್ಷ ನವೆಂಬರ್‌ 10ರಂದು ನಡೆದ ಸ್ಫೋಟದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಹೊಸದಾಗಿ ಆರೋಪಪಟ್ಟಿಗೆ ಸೇರಿರುವ ಮೂವರು ಸಂಚಿನಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಎನ್‌ಐಎ ತಿಳಿಸಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *