Breaking News

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಮನೆಗಳ್ಳರು ಅರೆಸ್ಟ್

ಕಿತ್ತೂರು : ಇಲ್ಲಿನ ವಿವಿಧ ಗ್ರಾಮಗಳಲ್ಲಿ ಸರಣಿ ಕಳ್ಳತನ ಎಸಗಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳನ್ನು ಕಿತ್ತೂರು ಠಾಣೆಯ ಪೊಲೀಸರು ಯಶಸ್ವಿ ಕಾರ್ಯಾಚರಣೆಯ ಮೂಲಕ ಸೆರೆಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಂಗೋಳ್ಳಿ ಹಾಗೂ ಅವರಾದಿ ಗ್ರಾಮಗಳ ಮನೆಗಳಲ್ಲಿ ನಡೆದಿದ್ದ ಕಳವು ಪ್ರಕರಣಗಳನ್ನು ಭೇದಿಸುವಲ್ಲಿ ಕೊನೆಗೂ ಪೊಲೀಸ್ ತಂಡ ಯಶಸ್ವಿಯಾಗಿದೆ. ಈ ಬಂಧಿತ ಆರೋಪಿಗಳನ್ನು ಹೊಳಿ ನಾಗಲಾಪುರದ ಪತ್ರಯ್ಯ ನಿಂಗಯ್ಯ ಹಿರೇಮಠ ಮತ್ತು ಬೈಲಹೊಂಗಲದ ಅನಿಲಕುಮಾರ ಹಿರೇಮಠ ಎಂದು ಗುರುತಿಸಲಾಗಿದ್ದು, ಸದ್ಯ ಇವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಖದೀಮರಿಂದ ಸುಮಾರು ೬೦ ಗ್ರಾಂ ಚಿನ್ನಾಭರಣ, ಒಂದು ಕಾರು ಹಾಗೂ ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಡಿವೈಎಸ್ಪಿ ವೀರಯ್ಯ ಹಿರೇಮಠ ಮಾಹಿತಿ ನೀಡಿದ್ದಾರೆ. ಈ ಮಹತ್ವದ ಪತ್ತೆ ಕಾರ್ಯದಲ್ಲಿ ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಭರತ್ ಹಾಗೂ ಸಿಬ್ಬಂದಿಗಳಾದ ಗಂಗಾಧರ ಹಂಪಣ್ಣವರ, ಲಿಂಗರಾಜ ಗಳಿಗಿ, ಸುನಿಲ್ ಮುರಗೋಡ, ಅದೃಷ್ ಚಿಕ್ಕೇರಿ, ಶರೀಫ್ ದಪೇದಾರ, ನಾಗರಾಜ್ ಕಡಗನ್ನವರ್ ಮತ್ತು ಮಂಜುನಾಥ್ ಕಂಬಾರ್ ಪ್ರಮುಖ ಪಾತ್ರ ವಹಿಸಿದ್ದರು.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *