Breaking News

ದಾಖಲೆಯಿಲ್ಲದೇ ಶೆಡ್ ನಲ್ಲಿ ಬಿದ್ದಿದ್ದ ಕೋಟಿ ಕೋಟಿ ರೂಪಾಯಿ ಹಣ ಸೀಜ್!

ಬೆಂಗಳೂರು: ನಗರದ ಕುರುಬರಹಳ್ಳಿಯ ಕೈಗಾರಿಕಾ ಶೆಡ್‌ನಲ್ಲಿ ದಾಖಲೆಗಳಿಲ್ಲದ ₹2.98 ಕೋಟಿ ನಗದನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಜಪ್ತಿ ಮಾಡಿದ್ದಾರೆ. ನಾಲ್ಕು ಬ್ಯಾಗ್‌ಗಳಲ್ಲಿ ಬಚ್ಚಿಟ್ಟಿದ್ದ ಹಣ ಜೂನ್ 2ರಂದು ಗಸ್ತಿನ ವೇಳೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಈ ಹಣ ತಾವರೆಕೆರೆ ನಿವಾಸಿ ನಾಗರಾಜ್‌ಗೆ ಸೇರಿದ್ದು, ಐಟಿ ಅಧಿಕಾರಿಗಳ ಕಣ್ಣು ತಪ್ಪಿಸಲು ಸ್ನೇಹಿತ ವೆಂಕಟೇಶ್‌ಗೆ ಸೇರಿದ ಶೆಡ್‌ನಲ್ಲಿ ಇಡಲಾಗಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣದ ಕುರಿತು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ನ್ಯಾಯಾಲಯದ ಅನುಮತಿ ಬಳಿಕ ಎಫ್‌ಐಆರ್ ದಾಖಲಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *