Breaking News

ಹುಬ್ಬಳ್ಳಿಯಲ್ಲಿ ರೈಲ್ವೆ ಟೆಂಡರ್ ಹೆಸರಿನಲ್ಲಿ ₹86.06 ಲಕ್ಷ ಸೈಬರ್ ವಂಚನೆ

ಹುಬ್ಬಳ್ಳಿ: ರೈಲ್ವೆ ಟೆಂಡರ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂದು ನಗರದ ವಿಲ್ಸನ್‌ ತಲಪತಿ ಅವರನ್ನು ನಂಬಿಸಿ, ₹86.06 ಲಕ್ಷ ಪಡೆದು ವಂಚಿಸಿದ ವ್ಯಕ್ತಿಯ ವಿರುದ್ಧ ಹುಬ್ಬಳ್ಳಿ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ನಿವಾಸಿ ರಮೇಶ ವೈ.ವಿರುದ್ಧ ದೂರು ನೀಡಲಾಗಿದೆ. ರೈಲ್ವೆ ಟೆಂಡರ್‌ಗಳಲ್ಲಿ ಹೂಡಿಕೆ ಮಾಡಿದರೆ ಶೇ 18ರಿಂದ ಶೇ 28ರವರೆಗೆ ಲಾಭಾಂಶ ನೀಡುವುದಾಗಿ ಹೇಳಿ ಆರೋಪಿಯು, 2024ರಿಂದ ಫೆಬ್ರುವರಿ 2025ರವರೆಗೆ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *