ಬೆಂಗಳೂರು: ಜೆಪಿ ನಗರದ ಐಜಿ ಸರ್ಕಲ್‌ನಲ್ಲಿ ರೌಡಿಶೀಟರ್ ರಾಜು ಅಲಿಯಾಸ್ ಹಲ್ಮುರ್ಕ್ ರಾಜಾ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರಾಜು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಹಳೆಯ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ರಾಜು ಹಲವು ಕೊಲೆ ಹಾಗೂ ಕೊಲೆ ಯತ್ನ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಸುಮಾರು 10 ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲೂ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.bಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟ್ ಸಂತೋಷ್ ಎಂಬ ಆರೋಪಿಯನ್ನು ಬಂಧಿಸಿರುವ ಜೆಪಿ ನಗರ ಪೊಲೀಸರು, ಇತರ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

