Breaking News

ಸಿಲಿಕಾನ್‌ ಸಿಟಿಯಲ್ಲಿ ಗೂಂಡಾಗಳ ಅಟ್ಟಹಾಸ – ಹಾಡಹಗಲೇ ನಡುರಸ್ತೆಯಲ್ಲಿ ರೌಡಿಶೀಟರ್‌ ಕಗ್ಗೊ*ಲೆ!

ಬೆಂಗಳೂರು: ನಗರದ ಜೆ.ಪಿ.ನಗರದ ಐಜಿ ಸರ್ಕಲ್‌ ಬಳಿ ರೌಡಿಶೀಟರ್ ರಾಜು ಭಾಯ್ ಅಲಿಯಾಸ್ ಅಲ್ ಮುರ್ಕ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ. ಸಂಜೆ 5.30ರ ಸುಮಾರಿಗೆ ಚಹಾ ಕುಡಿದು ಮನೆಗೆ ಮರಳುತ್ತಿದ್ದ ವೇಳೆ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜು ಭಾಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಸುಮಾರು 10 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಹಳೆಯ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ದಾಳಿ ನಡೆಸಿದ ಆರೋಪಿಗಳು ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜೆ.ಪಿ.ನಗರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *