ಅಥಣಿ: ತಾಲೂಕಿನ ಕಟಗೇರಿ ಗ್ರಾಮದಲ್ಲಿ ಪತ್ನಿಯ ಮೇಲಿನ ಸಂಶಯದ ಹಿನ್ನೆಲೆ ಗಂಡನೇ ಮಲಗಿದ್ದ ಪತ್ನಿಯನ್ನು ಕೊಲೆ ಮಾಡಿದ ಘಟನೆ ನಡೆದಿದೆ. ಶೋಭಾ ಪರಗೊಂಡ ಸಾರವಾಡ ಮೃತರಾಗಿದ್ದು, ಆರೋಪಿ ಪತಿ ಪರಗೊಂಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಂಪತಿ ಅವಜೀಕರ ಮಠದಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿಯ ನಡತೆಯ ಬಗ್ಗೆ ಅನುಮಾನ ಹೊಂದಿದ್ದ ಪರಗೊಂಡ, ಕೌಟುಂಬಿಕ ಕಲಹದ ನಡುವೆ ಶೋಭಾ ಗಾಢ ನಿದ್ರೆಯಲ್ಲಿದ್ದ ವೇಳೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

