Breaking News

ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಸುಟ್ಟು ಕರಕಲಾದ ಸಮವಸ್ತ್ರ, ಪಠ್ಯಪುಸ್ತಕ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗುಂಟ್ರಾಳ ಗ್ರಾಮದ ಸರ್ಕಾರಿ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಶಾಲೆಯಲ್ಲಿದ್ದ ಸಮವಸ್ತ್ರ, ಪಠ್ಯಪುಸ್ತಕಗಳು ಸುಟ್ಟು ಹೋಗಿವೆ. ಶಾಲೆಯ ಆವರಣದಲ್ಲಿ ಅನೈತಿಕ ಚಟುವಟಿಕೆ ನಡೆಸದಂತೆ ಬುದ್ಧಿವಾದ ಹೇಳಿದ್ದಕ್ಕೆ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ/ ಶಾಲೆಯ ಆವರಣದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನ, ಧೂಮಪಾನ ಸೇರಿದಂತೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಇತ್ತೀಚೆಗೆ ಶಾಲೆಯ ಬೀಗ ಮುರಿದು ಒಳಗೆ ಮಲಗಿದ್ದರು.ಶಾಲೆಯ ಎಸ್.ಡಿ.ಎಂ.ಸಿ. ಸದಸ್ಯರು ಮತ್ತು ಶಿಕ್ಷಕರು ಈ ರೀತಿ ಮಾಡದಂತೆ ತಾಕೀತು ಮಾಡಿ ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ. ಇದನ್ನು ಸಹಿಸದ ಕಿಡಿಗೇಡಿಗಳು ನಿನ್ನೆ ರಾತ್ರಿ ಶಾಲೆಯ ಬೀಗ ಮುರಿದು ಒಳಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಮಕ್ಕಳ ಸಮವಸ್ತ್ರ, ಪಠ್ಯ ಪುಸ್ತಕಗಳು ಸುಟ್ಟು ಕರಕಲಾಗಿವೆ. ಘಟನೆಯ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಗಬ್ಬೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *