Breaking News

ಬೆಂಗಳೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ, ನಿಯಂತ್ರಣಕ್ಕೆ ಬಾರದ ಬೆಂಕಿ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ತಯಾರಿಕಾ ಕಂಪನಿಯಲ್ಲಿ ಶನಿವಾರ ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆಸಿಡ್ ಮತ್ತು ಟಿನ್ನರ್ ಸೇರಿದಂತೆ ರಾಸಾಯನಿಕ ವಸ್ತುಗಳಿದ್ದ ಕಾರಣ ಬೆಂಕಿ ವೇಗವಾಗಿ ಇಡೀ ಕಾರ್ಖಾನೆಗೆ ವ್ಯಾಪಿಸಿದೆ. ರಜಾದಿನವಾಗಿದ್ದರಿಂದ ಕಂಪನಿಯಲ್ಲಿ ಕೇವಲ 20 ಕಾರ್ಮಿಕರಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಹೊರಬಂದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳ ಮತ್ತು ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದಾರೆ. ಕಂಪನಿಯೊಳಗಿನ ಗ್ಯಾಸ್ ಲೈನ್‌ಗೆ ಬೆಂಕಿ ತಗುಲುವ ಆತಂಕ ಎದುರಾಗಿದ್ದು, ಸ್ಫೋಟದ ಸಾಧ್ಯತೆಯನ್ನು ತಪ್ಪಿಸಲು ಸಿಬ್ಬಂದಿ ಗ್ಯಾಸ್ ಲೈನ್ ಸ್ಥಗಿತಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೆಚ್ಚುವರಿ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *