ರಾಯಚೂರು: ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಕಟ್ಟಡದ ಮೇಲ್ಛಾವಣಿಯ ಸಿಮೆಂಟ್ ಸಜ್ಜಾ ಕುಸಿದು ಮೂವರು ಯುವಕರು ಮೃತಪಟ್ಟಿದ್ದಾರೆ. ಮೃತರನ್ನು ರವಿಚಂದ್ರ (35), ನಾಗರಾಜ್ (30) ಹಾಗೂ ಅರ್ಜುನ್ (21) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಯುವಕರು ತಮ್ಮ ಕಿರುಚಿತ್ರದ ಪೋಸ್ಟರ್ ಅಂಟಿಸಲು ತೆರಳಿದ್ದ ವೇಳೆ ಅವಘಡ ಸಂಭವಿಸಿದೆ. ದೇವದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಟ್ಟಡ ಕುಸಿತದ ಕಾರಣದ ಕುರಿತು ತನಿಖೆ ಆರಂಭಿಸಿದ್ದು, ಸ್ಥಳಕ್ಕೆ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

