Breaking News

6 ತಿಂಗಳಲ್ಲಿ ₹25 ಲಕ್ಷದ 59 ಕೆ.ಜಿ ಗಾಂಜಾ ವಶಪಡಿಸಿಕೊಂಡ ಶಿವಮೊಗ್ಗ ಪೊಲೀಸ್

ಶಿವಮೊಗ್ಗ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕಾರ್ಯಾಚರಣೆ ಮುಂದುವರಿಸಿದ್ದು, ಕಳೆದ ಆರು ತಿಂಗಳಲ್ಲಿ ₹25 ಲಕ್ಷ ಮೌಲ್ಯದ 59 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದೆ. ಈ ಅವಧಿಯಲ್ಲಿ 31 ಪ್ರಕರಣ ದಾಖಲಿಸಿ 64 ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಗಾಂಜಾ ಸೇವನೆ ಪತ್ತೆಗಾಗಿ 1,426 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, 385 ಮಂದಿ ಸೇವಿಸಿರುವುದು ದೃಢಪಟ್ಟಿದೆ. ಅವರ ವಿರುದ್ಧ 349 ಪ್ರಕರಣ ದಾಖಲಿಸಲಾಗಿದ್ದು, 352 ಮಂದಿಗೆ ಆಪ್ತ ಸಮಾಲೋಚನೆಯನ್ನೂ ನೀಡಲಾಗಿದೆ. ಆಂಧ್ರ ಪ್ರದೇಶ ಮತ್ತು ಒಡಿಶಾದಿಂದ ನಡೆಯುತ್ತಿದ್ದ ಗಾಂಜಾ ಕಳ್ಳಸಾಗಣೆ ಜಾಲದ ವಿರುದ್ಧವೂ ಕ್ರಮ ಕೈಗೊಂಡಿರುವ ಪೊಲೀಸರು, ಎಂಟು ಮಂದಿಯನ್ನು ಬಂಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಲೆ-ಕಾಲೇಜುಗಳಲ್ಲಿ ವಿಶೇಷ ಕಾರ್ಯಾಚರಣೆ, ಡ್ರೋನ್ ಕಣ್ಗಾವಲು ಹಾಗೂ ಸೈಬರ್ ತನಿಖೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಎಸ್ಪಿ ಬಿ. ನಿಖಿಲ್ ತಿಳಿಸಿದ್ದಾರೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *