Breaking News

ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಬಗ್ಗೆ ಕೆಟ್ಟದ್ದಾಗಿ ಕಮೆಂಟ್: ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡದ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕಿದ ಆರೋಪದಡಿ ಇಬ್ಬರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾರ್ತಾಭಾರತಿ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಕಟಿಸಿದ್ದ ಖಾಝಿ ಅವರ ಧಾರ್ಮಿಕ ಬೋಧನೆಯ ವಿಡಿಯೊಗೆ ವಿಶ್ವೇಶ್ವರ ಭಟ್ ಹಾಗೂ ಕ್ಲೇರಾ ರೂಫ್‌67 ಎಂಬ ಹೆಸರಿನ ಖಾತೆಗಳಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಕಾಮೆಂಟ್‌ಗಳನ್ನು ಮಾಡಲಾಗಿದೆ ಎಂದು ಅಬ್ದುಲ್ ರಶೀದ್ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾಮೆಂಟ್‌ಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *