ಚನ್ನಪಟ್ಟಣ: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಆಟೊ ಚಾಲಕ ಭರತ್ (28) ಚಾಕು ಇರಿತದಿಂದ ಮೃತಪಟ್ಟಿದ್ದಾರೆ. ಘಟನೆ ನಗರದ ಸಾತನೂರು ಸರ್ಕಲ್ ಸಮೀಪದ ಖಾಸಗಿ ಹೋಟೆಲ್ ಎದುರು ನಡೆದಿದೆ. ಬಾರ್‌ನಲ್ಲಿ ಆರಂಭವಾದ ಜಗಳದ ಬಳಿಕ ಅಭಿ (27) ಮತ್ತು ಮಧು (26) ಭರತ್‌ನನ್ನು ಹಿಂಬಾಲಿಸಿ ಹೋಟೆಲ್ ಬಳಿ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದಾರೆ. ತೀವ್ರ ರಕ್ತಸ್ರಾವದಿಂದ ಭರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ನಗರದ ಪೂರ್ವ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

