Breaking News

ನೋಯ್ಡಾ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ಎಸಿ ಬ್ಲಾಸ್ಟ್‌ ಶಂಕೆ!

ನೋಯ್ಡಾದ ಸೆಕ್ಟರ್-119ರ ‘ಅರಣ್ಯ ಸೊಸೈಟಿ’ ಅಪಾರ್ಟ್‌ಮೆಂಟ್‌ನ 21ನೇ ಮಹಡಿಯಲ್ಲಿ ಸೋಮವಾರ (ಜೂ.29) ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಏರ್ ಕಂಡೀಷನರ್ (ಎಸಿ) ಸ್ಫೋಟಗೊಂಡಿರುವುದೇ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ. ಅಪಾರ್ಟ್‌ಮೆಂಟ್‌ನಿಂದ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆರು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಯುದ್ಧೋಪಾದಿಯಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಲ್ಲಿ ಯಾರಾದರೂ ಸಿಲುಕಿಕೊಂಡಿರುವ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಅವಘಡದ ನಿಖರ ಕಾರಣವನ್ನು ತನಿಖೆಯ ಬಳಿಕವೇ ಅಧಿಕಾರಿಗಳು ದೃಢಪಡಿಸಲಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *