Breaking News

ಬೆಂಗಳೂರು : ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಕುತ್ತಿಗೆಗೆ ಇರಿದು ಕೊಂದ ಪ್ರಿಯಕರ

ಬೆಂಗಳೂರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆಗೆ ನಿರಾಕರಿಸಿದ ಯುವತಿಯನ್ನು ಪ್ರಿಯಕರ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ. ಕೆಪಿ ಅಗ್ರಹಾರದ ನಿವಾಸಿ ಅಂಜಲಿ (23) ಮೃತ ಯುವತಿ. ಆರೋಪಿ ರಾಜೀವ್‌ನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಅಂಜಲಿ ಮತ್ತು ರಾಜೀವ್ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಕುಟುಂಬದ ವಿರೋಧದ ನಡುವೆ ಅಂಜಲಿ ಮದುವೆಗೆ ನಿರಾಕರಿಸಿದ್ದರಿಂದ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಸೋಮವಾರ ರಾತ್ರಿ ಭೇಟಿಯಾದ ವೇಳೆ ಮತ್ತೆ ಮದುವೆ ಪ್ರಸ್ತಾಪ ಮಾಡಿದ ರಾಜೀವ್‌ಗೆ ಅಂಜಲಿ ನಿರಾಕರಿಸಿದಾಗ ಜಗಳವಾಗಿ, ಬಳಿಕ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ಅಂಜಲಿಯನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರೂ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಜ್ಜಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *