Breaking News

ಹಳೇ ದ್ವೇಷಕ್ಕೆ ಹರಿದ ನೆತ್ತರು – ರೌಡಿಶೀಟರ್ ಕೊ*ಲೆಯ ಭೀಭತ್ಸ್ಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಬೆಂಗಳೂರು: ಜೆ.ಪಿ.ನಗರದಲ್ಲಿ ದಶಕದ ಹಿಂದಿನ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿಶೀಟರ್ ರಾಜ ಅಲಿಯಾಸ್ ಹಾಫ್ಮುಖ ರಾಜನನ್ನು ಸಾರ್ವಜನಿಕ ರಸ್ತೆಯಲ್ಲೇ ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು ಹೊರಬಿದ್ದಿವೆ. ಸಿಸಿಟಿವಿಯಲ್ಲಿ ರಾಜ ಜೀವ ಉಳಿಸಿಕೊಳ್ಳಲು ರಸ್ತೆಯಲ್ಲಿ ಓಡುತ್ತಿರುವುದು, ಆತನನ್ನು ಬೆನ್ನಟ್ಟಿದ ಮೂವರು ದುಷ್ಕರ್ಮಿಗಳು ರಸ್ತೆ ಮಧ್ಯೆಯೇ ಅಡ್ಡಗಟ್ಟಿ ಮಚ್ಚುಗಳಿಂದ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸೆರೆಯಾಗಿವೆ. ಹೋಮ್ ಗಾರ್ಡ್ಸ್ ಸಮ್ಮುಖದಲ್ಲೇ ಕೃತ್ಯ ಎಸಗಿದ ಆರೋಪಿಗಳು ಬಳಿಕ ಹಳದಿ ಬೋರ್ಡ್ ಹೊಂದಿದ್ದ ಕಾರಿನಲ್ಲಿ ಪರಾರಿಯಾಗಿದ್ದಾರೆ. ಹತ್ತು ವರ್ಷಗಳ ಹಿಂದಿನ ‘ಸ್ಟ್ಯಾಂಡ್ ಕುಟ್ಟಿ’ ಕೊಲೆ ಪ್ರಕರಣದ ಪ್ರತೀಕಾರವಾಗಿ ಈ ಹತ್ಯೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *