Breaking News

ರಾಮದೇವ್ ಹೋಟೆಲ್ ಬಳಿ ಕ್ಷಣಾರ್ಧದಲ್ಲೆ ಸುಟ್ಟು ಕರಕಲಾದ ಕಾರ್

ಬೆಳಗಾವಿ: ನಗರದ ರಾಮದೇವ್ ಹೋಟೆಲ್ ಸಮೀಪ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಎಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಹಾಗೂ ಪ್ರಯಾಣಿಕರು ಕಾರಿನಿಂದ ಇಳಿದು ಸುರಕ್ಷಿತವಾಗಿ ದೂರ ಸರಿದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ನಿಖರ ಕಾರಣ ತನಿಖೆಯಿಂದ ತಿಳಿಯಬೇಕಿದೆ. ಘಟನೆಯಿಂದ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *