Breaking News

ಬೆಂಗಳೂರು CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಟ್ರಾಲಿ ಬ್ಯಾಗ್ ನಲ್ಲಿ ಅಡಗಿಸಿಟ್ಟಿದ್ದ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಮೂವರು ನೈಜೀರಿಯನ್ ಪ್ರಜೆಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಲಗೇಜ್ ಟ್ರಾಲಿ ಬ್ಯಾಗ್‌ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ನೈಜೀರಿಯಾ ಮೂಲದ ಮೂವರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು ₹21 ಕೋಟಿ ಮೌಲ್ಯದ 10 ಕೆಜಿ 270 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, ನಾಲ್ಕು ಮೊಬೈಲ್‌ ಫೋನ್‌ಗಳು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮಾದನಾಯಕನಹಳ್ಳಿ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಮೆಡಿಕಲ್ ಮತ್ತು ಪ್ರವಾಸಿ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ವೀಸಾ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ನೆಲೆಸಿದ್ದರು. ಈ ಸಂಬಂಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಡ್ರಗ್ಸ್ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *