Breaking News

ರಾಜ್ಯದಲ್ಲೊಂದು ಸಿನಿಮಾ ಶೈಲಿಯಲ್ಲಿ ದರೋಡೆ: ಮಂಗಳೂರಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ₹20 ಲಕ್ಷ ಲೂಟಿ!

ಮಂಗಳೂರಿನ ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿ, ಕುಟುಂಬಸ್ಥರಿಗೆ ಬೆದರಿಕೆ ಒಡ್ಡಿದ ದುಷ್ಕರ್ಮಿಗಳು ಸುಮಾರು ₹20 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ. ವ್ಯಾಪಾರಿ ವಿಕಾಸ್ ಅವರು ಮಹಾರಾಷ್ಟ್ರದಿಂದ ಕುಟುಂಬದೊಂದಿಗೆ ಕೇರಳಕ್ಕೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ದರೋಡೆಕೋರರು ವಿಕಾಸ್ ಅವರನ್ನು ಕಾರಿನಿಂದ ಕೆಳಗಿಳಿಸಿ, ಅವರ ಪತ್ನಿ ಮತ್ತು ಮಗನಿದ್ದ ಕಾರನ್ನೇ ಅಪಹರಿಸಿದ್ದರು. ಬಳಿಕ ಕುಳೂರು ಸಮೀಪ ಇಬ್ಬರನ್ನೂ ಸುರಕ್ಷಿತವಾಗಿ ಇಳಿಸಿ, ಕಾರಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *