ಬೆಳಗಾವಿಯ ಬಸವನ ಗಲ್ಲಿಯ ಸಮರ್ಥ ನಗರ ಅಪಾರ್ಟ್‌ಮೆಂಟ್‌ಗೆ ಹಗಲು ಹೊತ್ತಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿ ಒಣ ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಕೃತ್ಯ ಅಪಾರ್ಟ್‌ಮೆಂಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 25ರಂದು ಮಧ್ಯಾಹ್ನ 2.10ರ ಸುಮಾರಿಗೆ ಎರಡನೇ ಮಹಡಿಗೆ ತೆರಳಿದ ಶಂಕಿತ ವ್ಯಕ್ತಿ ಒಣಗುತ್ತಿದ್ದ ಬಟ್ಟೆಗಳನ್ನು ತೆಗೆಯಲು ಮುಂದಾಗಿದ್ದಾನೆ. ಆದರೆ ಯಾರೋ ಬರುತ್ತಿರುವುದನ್ನು ಗಮನಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ನಿವಾಸಿ ಹಾಗೂ ಸಾಮಾಜಿಕ ಕಾರ್ಯಕರ್ತ ಅವಧೂತ್ ತುಡ್ವೇಕರ್ ಖಾಡೆ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಶಂಕಿತನಿಗಾಗಿ ಹುಡುಕಾಟ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

