Breaking News

ಕಸಾಯಿಖಾನೆಗೆ ಸಾಗಿಸುತ್ತಿದ್ದ 5 ಆಕಳು ರಕ್ಷಣೆ

ಸವಣೂರ: ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಹಿಡಿದ ಪೊಲೀಸರು 5 ಗೋವಿಗಳನ್ನು ರಕ್ಷಣೆ ಮಾಡಿರುವ ಘಟನೆ ಪಟ್ಟಣದ ಮಾವೂರ ರಸ್ತೆಯಲ್ಲಿ ನಡೆದಿದೆ. ಬ್ಯಾಡಗಿ ಪಟ್ಟಣದ ಶಿವಪುರ ಬಡಾವಣೆಯ ಮಹ್ಮದ್‌ಅಲಿ ಮುಸ್ತಫಾ ಬೆಳಗಾಂವ (33) ಹಾಗೂ ಮಹಬೂಬಸಾಬ ಬಾಬಾಜಾನಸಾಬ ಬೆಳಗಾಂವ (45) ಎಂಬುವರು ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಶೋಕ ಲೈಲ್ಯಾಂಡ್ ವಾಹನ ವಶಕ್ಕೆ ಪಡೆದು 5 ಆಕಳುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *